HomeUncategorizedBIG NEWS: ಬೆಳಗಾವಿಯಲ್ಲಿ ಬ್ಯೂಟಿ ಪಾರ್ಲರ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ!

BIG NEWS: ಬೆಳಗಾವಿಯಲ್ಲಿ ಬ್ಯೂಟಿ ಪಾರ್ಲರ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ!

ಬೆಳಗಾವಿ: ಬೆಳಗಾವಿಯಲ್ಲಿ 30ಕ್ಕೂ ಹೆಚ್ಚು ಬ್ಯೂಟಿ ಪಾರ್ಲರ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಅಕರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ರಾಸಾಯನಿಕ ಮಿಶ್ರಿತ ಹಲವು ಆರೋಗ್ಯ ವರ್ದಕಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ನಗರದ ವಿವಿಧ ಬ್ಯೂಟಿ ಪಾರ್ಲರ್ ಗಳಲ್ಲಿ ಕೂದಲಿನ ಕಸಿ, ಕೆಮಿಕಲ್ ಮಿಶ್ರಿತ ವಸ್ತುಗಳ ಬಳಕೆ, ಸ್ಟಿರೈಡ್ ಸೇರಿದಂತೆ ಚರ್ಮದ ಮೇಲೆ ದುಷ್ಪರಿಣಾಮ ಬೀರುವ ವಸ್ತುಗಳನ್ನು ಬಳಸಲಾಗುತ್ತಿದೆ ಎಂದು ಸಾರ್ವಜನಿಕರು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ಎಲ್ಲಾ ಪಾರ್ಲರ್ ಗಳ ಮೇಲೆ ದಾಳಿ ನಡೆಸುವಂತೆ ಸೂಚಿಸಿದ್ದರು. ಇಂದು ಆರೋಗ್ಯ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ 30ಕ್ಕೂ ಹೆಚ್ಚು ಪಾರ್ಲರ್ ಗಳ ಮೇಲೆ ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾಳಿ ವೇಳೆ ಹಲವು ಕೆಮಿಕಲ್ ವಸ್ತುಗಳು, ಸ್ಟಿರೈಡ್ ಔಷಧಿಗಳು ಪತ್ತೆಯಾಗಿವೆ. 10 ಪಾರ್ಲರ್ ಗಳಿಗೆ ಬೀಗ ಹಾಕಿಸಿರುವ ಅಧಿಕಾರಿಗಳು 20 ಪಾರ್ಲರ್ ಗಳಿಗೆ ನೋಟಿಸ್ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular