ಬೆಂಗಳೂರು: ಆರೋಗ್ಯ ಇಲಾಖೆಯಡಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಮತ್ತು ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ವೃಂದದ ನಿಯೋಜನೆಯನ್ನು ರದ್ದು ಪಡಿಸುವ ಕುರಿತಂತೆ ಸರ್ಕಾರ ಆದೇಶ ಹೊರಡಿಸಿದೆ.
ಜಿಲ್ಲಾ ಮತ್ತು ತಾಲೂಕು ಮಟ್ಟದ ಆಸ್ಪತ್ರೆ, ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ವೃಂದದ ಯೋಜನೆ ರದ್ದು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.
ಈ ಎಲ್ಲ ನಿಯೋಜನೆಗಳನ್ನು ರದ್ದುಗೊಳಿಸುವುದು ಹಾಗೂ ಹೆಚ್ಚುವರಿ ಹುದ್ದೆಗಳನ್ನು ಅಗತ್ಯವಿರುವ ಕ್ಷೇತ್ರೀಯ ಮಟ್ಟದ ಆರೋಗ್ಯ ಸಂಸ್ಥೆಗಳಿಗೆ ವರ್ಗಾಯಿಸಿ ಮರು ಹಂಚಿಕೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ.
ಪ್ರಸ್ತುತ 123 ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ, 126 ಆರೋಗ್ಯ ನಿರೀಕ್ಷಣಾಧಿಕಾರಿಗಳು ಕಾಯಂ ಮತ್ತು ಗುತ್ತಿಗೆ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹುದ್ದೆಗಳನ್ನು ರದ್ದು ಮಾಡಲು ಆರೋಗ್ಯ ಇಲಾಖೆ ಆದೇಶಿಸಿದೆ.