HomeKarnatakaತಾಪಮಾನ ಹೆಚ್ಚಳ ಹಿನ್ನೆಲೆ ರಾಜ್ಯದ ಆಸ್ಪತ್ರೆಗಳಲ್ಲಿ ವಿಶೇಷ ವ್ಯವಸ್ಥೆಗೆ ಆರೋಗ್ಯ ಇಲಾಖೆ ಆದೇಶ

ತಾಪಮಾನ ಹೆಚ್ಚಳ ಹಿನ್ನೆಲೆ ರಾಜ್ಯದ ಆಸ್ಪತ್ರೆಗಳಲ್ಲಿ ವಿಶೇಷ ವ್ಯವಸ್ಥೆಗೆ ಆರೋಗ್ಯ ಇಲಾಖೆ ಆದೇಶ

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಶಾಖಾಘಾತ ಪ್ರಕರಣಗಳ ನಿರ್ವಹಣೆಗೆ ಜುಲೈ 31 ರವರೆಗೆ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ 10 ಬೆಡ್ ಗಳು, ತಾಲೂಕು ಆಸ್ಪತ್ರೆಯಲ್ಲಿ 5 ಬೆಡ್ ಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಎರಡು ಬೆಡ್ ನಿರ್ವಹಣೆ ಕೊಠಡಿ ಮೀಸಲಿಡುವಂತೆ ಆರೋಗ್ಯ ಇಲಾಖೆ ಆದೇಶಿಸಿದೆ.

ಬೇಸಿಗೆಯಿಂದ ಸನ್ ಸ್ಟ್ರೋಕ್ ನಂತಹ ಅನಾರೋಗ್ಯ ಸಮಸ್ಯೆ ಉಂಟಾಗುತ್ತಿವೆ. ಇವುಗಳನ್ನು ನಿರ್ವಹಿಸಿ ಮುಂದಿನ ಅಪಾಯ ತಪ್ಪಿಸಲು ಮುನ್ನೆಚ್ಚರಿಕೆ ವಹಿಸಬೇಕೆಂದು ಆರೋಗ್ಯ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಆಸ್ಪತ್ರೆಗಳಲ್ಲಿ ಬೆಡ್ ಗಳನ್ನು ಮೀಸಲಿಡುವ ಜೊತೆಗೆ ಶಾಖ ಆಧಾರಿತ ಅನಾರೋಗ್ಯ ನಿರ್ವಹಣೆ ಕುರಿತು ಎಲ್ಲಾ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿಗೆ ತರಬೇತಿ ನೀಡಬೇಕು. ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಓಆರ್ಎಸ್ ಕಾರ್ನರ್ ಸ್ಥಾಪಿಸಬೇಕು. ನಿರ್ವಹಣೆಗೆ ಕೊಠಡಿಗಳನ್ನು ಸಿದ್ಧಪಡಿಸಬೇಕು. ಹೀಟ್ ಸ್ಟ್ರೋಕ್ ನಿರ್ವಹಣೆಗೆ ಕೊಠಡಿಗಳನ್ನು ಸಿದ್ಧಪಡಿಸಿ ಫ್ಯಾನ್, ಐಸ್ ಕ್ಯೂಬ್ಸ್, ಥರ್ಮಾಮೀಟರ್ ಸೇರಿ ಸೌಲಭ್ಯ ಒದಗಿಸಬೇಕು. ಎಲ್ಲಾ ಹಂತದ ಆರೋಗ್ಯ ಸೇವೆ ಸಂಸ್ಥೆಗಳು ಶಾಖ ಆಧಾರಿತ ಅನಾರೋಗ್ಯ ಪ್ರಕರಣಗಳ ದೈನಂದಿನ ವರದಿ ಸಲ್ಲಿಸಲು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular