ರಾಜ್ಯಾದ್ಯಂತ ನಾಳೆಯಿಂದ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಗುಣಮಟ್ಟ ತಪಾಸಣೆ

ಬೆಂಗಳೂರು: ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಆಗಸ್ಟ್ 30 ಮತ್ತು 31 ರಂದು ಹೋಟೆಲ್, ರೆಸ್ಟೋರೆಂಟ್ ಗಳಲ್ಲಿರುವ ಆಹಾರ ಸುರಕ್ಷತೆ ಬಗ್ಗೆ ವಿಶೇಷ ತಪಾಸಣೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಾಂಸ, ಮೀನು, ಮೊಟ್ಟೆಗಳ ಆಹಾರ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆ ನಡೆಸಲಾಗುವುದು. ಅಸುರಕ್ಷಿತ ಆಹಾರ ತಯಾರಿಸುತ್ತಿರುವವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ತಾವು ಸೇವಿಸುವ ಆಹಾರದ ಗುಣಮಟ್ಟವನ್ನು ತಾವೇ ಪರೀಕ್ಷಿಸಿಕೊಳ್ಳಲು ಅನುಕೂಲವಾಗುವಂತೆ ಹೋಟೆಲ್, ರೆಸ್ಟೋರೆಂಟ್, ಫುಡ್ ಪಾರ್ಕ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 3400 ಟೆಸ್ಟಿಂಗ್ ಕಿಟ್ ಅಳವಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಆಹಾರ ಸುರಕ್ಷತಾ ಇಲಾಖೆ ಕಳೆದು ಒಂದು ವರ್ಷದಿಂದ ಆಹಾರದ ಗುಣಮಟ್ಟ ಪರೀಕ್ಷಿಸುವ ಕಾರ್ಯ ನಡೆಸಿಕೊಂಡು ಬರುತ್ತಿದೆ. ಹಣ್ಣು, ತರಕಾರಿಗಳ 385 ಮಾದರಿ ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, 239 ಸುರಕ್ಷಿತ, 27 ಅಸುರಕ್ಷಿತ ಎಂದು ಕಂಡು ಬಂದಿದೆ. ಅಸುರಕ್ಷಿತ ಮಾದರಿಗಳಲ್ಲಿ ಕ್ರಿಮಿನಾಶಕಗಳು ಹೆಚ್ಚಿನ ಪ್ರಮಾಣದಲ್ಲಿವೆ. ಕೇಕ್, ಕೋವಾ ಆಹಾರ ಮಾದರಿಗಳನ್ನು ಕೂಡ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, ವರದಿ ಬಳಿಕ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read