ಮಂಗಳೂರು: ಸರ್ಕಾರದ ಎಲ್ಲಾ ಚಿಕಿತ್ಸಾ ಕೇಂದ್ರದಲ್ಲಿ ಹೆಲ್ತ್ ಟ್ರ್ಯಾಕ್ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಆರೋಗ್ಯ ಇಲಾಖೆಗೆ ಒಳಪಡುವ ಎಲ್ಲಾ ಜಿಲ್ಲಾಸ್ಪತ್ರೆ, ತಾಲೂಕು, ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಬ್ಲಡ್ ಬ್ಯಾಂಕ್ ವರೆಗೆ ಎಲ್ಲವನ್ನು ಡಿಜಿಟಲೀಕರಣ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ಪೇಪರ್ ಲೆಸ್ ಆಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಸಕ್ತ 40 ಕಡೆಗಳಲ್ಲಿ ಇದು ಪ್ರಾಯೋಗಿಕವಾಗಿ ನಡೆಯುತ್ತಿದೆ. ಇದನ್ನು 183 ಕಡೆಗಳಿಗೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
ರೋಗಿಗಳು ಆಸ್ಪತ್ರೆಗೆ ಆಗಮಿಸಿದಾಗ ಅವರಿಗೆ ಈ ಹಿಂದೆ ನೀಡಿದ ಚಿಕಿತ್ಸೆಯ ಎಲ್ಲಾ ವಿವರಗಳು ಲಭಿಸಬೇಕು. ಈ ರೀತಿಯ ಹೆಲ್ತ್ ಟ್ರ್ಯಾಕ್ ಕಾರ್ಡ್ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

