HomeKarnatakaಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು: ಕಂಬನಿ ಮಿಡಿದ ಸಹಪಾಠಿಗಳು

ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು: ಕಂಬನಿ ಮಿಡಿದ ಸಹಪಾಠಿಗಳು

ತುಮಕೂರು: ಎರಡು ದಿನಗಳ ಹಿಂದೆಯಷ್ಟೇ ತುಮಕೂರು ಜಿಲ್ಲೆಯಲ್ಲಿ ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿ ಮೃತಪಟ್ಟ ಪ್ರಕರಣ ಮಾಸುವ ಮೊದಲೇ ಪಾವಗಢದಲ್ಲಿ ಪ್ರಥಮ ಬಿಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪಾವಗಡದ ಸರ್ಕಾರಿ ಪದವಿ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ಮೈಥಿಲಿ(19) ಮೃತಪಟ್ಟವರು. ಮಧುಗಿರಿ ತಾಲೂಕಿನ ಮಿಡಿಗೇಶಿ ಮೂಲದ ಮೈಥಿಲಿ ಶನಿವಾರ ತರಗತಿ ಮುಗಿಸಿ ಪಟ್ಟಣದ ನಿಲ್ದಾಣಕ್ಕೆ ಬರುವಾಗ ಚಳ್ಳಕೆರೆ ಕ್ರಾಸ್ ಬಳಿ ಸುಸ್ತಾಗಿ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಆಂಬುಲೆನ್ಸ್ ನಲ್ಲಿ ಪಾವಗಡದ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೈಥಿಲಿ ಅವರ ಅಕಾಲಿಕ ನಿಧನಕ್ಕೆ ಸಹಪಾಠಿಗಳು, ಸ್ನೇಹಿತರು, ಅಧ್ಯಾಪಕರು ಕಂಬನಿ ನಡೆದಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular