HomeKarnatakaBREAKING: ಹಾಸ್ಟೆಲ್‌ ಶೌಚಾಲಯದಲ್ಲಿಯೇ ಕುಸಿದು ಬಿದ್ದ 8ನೇ ತರಗತಿ ವಿದ್ಯಾರ್ಥಿನಿ: ಹೃದಯಾಘಾತದಿಂದ ಸಾವು

BREAKING: ಹಾಸ್ಟೆಲ್‌ ಶೌಚಾಲಯದಲ್ಲಿಯೇ ಕುಸಿದು ಬಿದ್ದ 8ನೇ ತರಗತಿ ವಿದ್ಯಾರ್ಥಿನಿ: ಹೃದಯಾಘಾತದಿಂದ ಸಾವು

ತುಮಕೂರು: 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೇಲ್ ಶೌಚಾಲಯದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ರಂಗಸಮುದ್ರ ಗ್ರಾಮದ ಕಸ್ತೂರಬಾ ಗಾಂಧಿ ಬಾಲಕಿಯರ ಹಾಸ್ಟೆಲ್‌ನಲ್ಲಿ ನಡೆದಿದೆ.

ಪ್ರಿಯಾಂಕಾ ಹೃದಯಾಘಾತದಿಂದ ಸಾವನ್ನಪ್ಪಿರುವ ವಿದ್ಯಾರ್ಥಿನಿ. ಕಾರಗಾನಹಟ್ಟಿ ಗ್ರಾಮದ ನಿವಾಸಿಗಳಾದ ನರಸಿಂಹಮೂರ್ತಿ ಮತ್ತು ಶಾರದಮ್ಮ ದಂಪತಿಯ ಪುತ್ರಿ. ಈಕೆ ರಂಗಸಮುದ್ರದ ತ್ರಿಯಂಬಕೇಶ್ವರ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಿಯಾಂಕಾ ಚಿಕಿತ್ಸೆಗಾಗಿ ತನ್ನ ಸ್ವಗ್ರಾಮಕ್ಕೆ ತೆರಳಿದ್ದಳು. ಗುಣಮುಖಳಾದ ಬಳಿಕ ಆಗಸ್ಟ್ 7ರಂದು ಆಕೆ ಮರಳಿ ಹಾಸ್ಟೆಲ್‌ಗೆ ಬಂದಿದ್ದಳು. ಆದರೆ, ಶನಿವಾರ ಮುಂಜಾನೆ ಹಾಸ್ಟೆಲ್‌ನ ಶೌಚಾಲಯಕ್ಕೆ ತೆರಳಿದ್ದ ವೇಳೆ ದಿಢೀರನೆ ರಕ್ತದೊತ್ತಡ ಕಡಿಮೆಯಾಗಿ (ಲೋ ಬಿಪಿ) ಅಸ್ವಸ್ಥಗೊಂಡು ಶೌಚಾಲಯದಲ್ಲೇ ಕುಸಿದು ಬಿದ್ದಿದ್ದಾಳೆ. ಇದನ್ನು ಗಮನಿಸಿದ ಹಾಸ್ಟೆಲ್ ಸಿಬ್ಬಂದಿ ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯದಲ್ಲೇ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಬೆನ್ನಲ್ಲೇ ಕಸ್ತೂರಿಬಾ ಗಾಂಧಿ ಬಾಲಕಿಯರ ಹಾಸ್ಟೆಲ್‌ನಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳೂ ಇಲ್ಲ ಎಂದು ಸಾರ್ವಜನಿಕರು ಹಾಗೂ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪಾವಗಡ ತಹಶೀಲ್ದಾರ್ ವೈ. ರವಿ ಹಾಗೂ ಪಾವಗಡ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾವಗಡದ ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular