ಬಾಗಲಕೋಟೆ: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದೆ. ನಗರಸಭೆ ಮಾಜಿ ಅಧ್ಯಕ್ಷರೊಬ್ಬರು ಚಹಾ ಕುಡಿಯುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ಮಾಜಿ ಅಧ್ಯಕ್ಷ ಸಿದ್ದು ಮೀಸಿ ಮೃತ ದುರ್ದೈವಿ. ಎಂದಿನಂದೆ ಮನೆಯ ಹೊರಗೆ ಚಹಾ ಕುಡಿಯುತ್ತಿದಾಗಲೇ ಎದೆ ನೋವಿನಿಂದ ಕುಸಿದು ಬಿದ್ದ ಸಿದ್ದು, ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಜಮಖಂಡಿ ಅಂಬೇಡ್ಕರ್ ಸರ್ಕಲ್ ಬಳಿಯ ನಿವಾಸದಲ್ಲಿ ಈ ಘಟನೆ ನಡೆದಿದೆ. ಸಿದು ಮೀಸಿ ಜಮಖಂಡಿ ತಾಲೂಕಿನ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿದ್ದರು ಎಂದು ತಿಳಿದುಬಂದಿದೆ.