HomeLatest NewsBREAKING NEWS: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಶಿಕ್ಷಕ!

BREAKING NEWS: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಶಿಕ್ಷಕ!

ಬಾಗಲಕೋಟೆ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಬಾಗಲಕೋಟೆಯಲ್ಲಿ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕ್ಲಾಸ್ ನಲ್ಲಿ ಪಾಠ ಮಾಡುತ್ತಿದ್ದಾಗಲೇ ಶಿಕ್ಷಕ ಹಠಾತ್ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ತುಂಗಳ ಹೈಸ್ಕೂಲಿನಲ್ಲಿ ಈ ಘಟನೆ ನಡೆದಿದೆ.

ಕನ್ನಡ ಶಿಕ್ಷಕ ಗುರುಪಾದ ಹಿಪ್ಪರಗಿ (49) ಮೃತ ಶಿಕ್ಷಕ. ರಬಕವಿ ಬನಹಟ್ಟಿ ಮೂಲದ ಗುರುಪಾದ ಹಿಪ್ಪರಗಿ, ಎಂದಿನಂತೆ ತರಗತಿಯಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿದ್ದಾಗ ಏಕಾಏಕಿ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular