ದಾವಣಗೆರೆ: ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವಿನ ಸರಣಿ ಮುಂದುವರೆದಿದೆ. ಉದ್ಯಮಿಯೊಬ್ಬರು ವಾಕಿಂಗ್ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಶಕ್ತಿ ನಗರದಲ್ಲಿ ಇಂದು ಮುಂಜಾನೆ ಈ ದುರಂತ ಸಂಭವಿಸಿದೆ. ಉದ್ಯಮಿ ಅನಿಲ್ ಕುಮಾರ್ ಮೃತ ದುರ್ದೈವಿ.
ವಾಕಿಂಗ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉದ್ಯಮಿ ಕುಸಿದು ಬೀಳುತ್ತಿರುವ ದೃಶ್ಯ ಅಂಗಡಿಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.