ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೃತರನ್ನು 26 ವರ್ಷದ ವೈಭವ್ ಕುಲಕರ್ಣಿ ಎಂದು ಗುರುತಿಸಲಾಗಿದೆ.ಬಾಗಲಕೋಟೆಯ ವಿವಿಎಸ್ ಮೆಡಿಕಲ್ ಕಾಲೇಜು ವಿದ್ಯಾರ್ಥಿ ವೈಭವ್ ಕುಲಕರ್ಣಿ ತಮಿಳುನಾಡು ಪ್ರವಾಸ ಮುಗಿಸಿ ಬರುತ್ತಿದ್ದಾಗ ಹೃದಯಾಘಾತ ಕಾಣಿಸಿಕೊಂಡಿದೆ. ಕೂಡಲೇ ಅವರನ್ನ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

