ಚಿಕ್ಕಮಗಳೂರು: ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಬಂದಿದ್ದ ಸಾಫ್ಟ್ ವೇರ್ ಇಂಜಿನಿಯರ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಮೂಲದ ಸಾಫ್ಟ್ ವೇರ್ ಇಂಜಿನಿಯರ್ ರಾಹುಲ್ (29) ಮೃತ ಯುವಕ. ಐವರು ಸ್ನೇಹಿತರ ಜೊತೆ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದರು. ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದರು. ಇದ್ದಕ್ಕಿದ್ದಂತೆ ಎದೆನೋವಿನಿಂದ ರಾಹುಲ್ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ಕಾರಿನಲ್ಲಿ ಕರೆದೊಯ್ಯುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆತಂಕಕಾರಿ ಬೆಳವಣಿಗೆಯಾಗಿದೆ.