ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಹೃದಯಾಘಾತಕ್ಕೆ 29 ವರ್ಷದ ಯುವಕ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಜಿಲ್ಲೆಯಲ್ಲಿ ಮತ್ತೋರ್ವ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಲಾರಿ ಚಾಲಕ ಸಗೀರ್ ಅಹ್ಮದ್(45) ಹೃದಯಾಘಾತದಿಂದ ಸಾವನ್ನಪ್ಪಿದವರು. ಅಜ್ಜಂಪುರ ಪಟ್ಟಣದ ನಿವಾಸಿಯಾಗಿದ್ದ ಸಗೀರ್ ಅಹ್ಮದ್ ಊಟ ಮಾಡುವಾಗ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಸ್ಥಳದಲ್ಲೇ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.