ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ತರಗತಿಯಲ್ಲಿ ಕುಳಿತಿದ್ದಾಗ ಏಕಾಏಕಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿ ಮೃತಪಟ್ಟಿದ್ದಾರೆ.
ಮೃತ ಬಾಲಕನನ್ನು ರಾಹುಲ್ (17) ಎಂದು ಗುರುತಿಸಲಾಗಿದೆ. ಬುಧವಾರ ತರಗತಿಯಲ್ಲಿ ಕುಳಿತಿದ್ದಾಗ ಏಕಾಏಕಿ ಕುಸಿದು ಬಿದ್ದಿದ್ದು, ಕೂಡಲೇ ಸಿಬ್ಬಂದಿಗಳು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮಧ್ಯಯೇ ಹೃದಯಾಘಾತದಿಂದ ರಾಹುಲ್ ಮೃತಪಟ್ಟಿದ್ದಾನೆ.
ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಆತಂಕ ಮನೆ ಮಾಡಿದೆ. ಹೃದಯಾಘಾತ ಕೇಸ್ ಹೆಚ್ಚಳದ ಬಗ್ಗೆ ತನಿಖೆ ನಡೆಸಲು ಸರ್ಕಾರ ಕೂಡ ಆದೇಶಿಸಿದೆ.
You Might Also Like
TAGGED:ಹೃದಯಾಘಾತ