ಚಿಕ್ಕಬಳ್ಳಾಪುರ: ಡಾನ್ಸ್ ಮಾಡುತ್ತಿದ್ದಗಲೇ ಕುಸಿದು ಬಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ನಡೆದಿದೆ.
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಡಾನ್ಸ್ ಮಾಡುತ್ತಾ ಏಕಾಏಕಿ ಕುಸಿದು ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಕ್ಷ್ಮೀಪತಿ ಮೃತ ದುರ್ದೈವೈ. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.