ಮಂಡ್ಯ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ಡಾನ್ಸ್ ಮಾಡುತ್ತ ಹೆಜ್ಜೆ ಹಾಕುತ್ತಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದ ಶಿಢ್ಲಘಟ್ಟದಲ್ಲಿಯೂ ಇಂಠದ್ದೇ ಘಟನೆ ನಡೆದಿತ್ತು. ಇದೀಗ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಡಾನ್ಸ್ ಮಾಡುತ್ತಾ ಕುಸಿದು ಬಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಮಂಜುನಾಥ್ ಮೃತ ದುರ್ದೈವಿ. ಕೆ.ಆರ್.ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಹಾಡಿಗೆ ಭರ್ಜರಿ ಸ್ಟೆಪ್ ಹಾಕುತ್ತಾ ಸಾಗಿದ್ದರು. ಈ ವೇಳೆ ಹಠಾತ್ ಹೃದಯಾಘಾತದಿಂದ ಮಂಜುನಾಥ್ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.