ಮಂಡ್ಯ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಂಡ್ಯ ಜಿಲ್ಲೆಯಲ್ಲಿ ಹಾರ್ಟ್ ಅಟ್ಯಾಕ್ ಗೆ 44 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ.
ಮಂಜುನಾಥ್ (44) ಮೃತ ದುರ್ದೈವಿ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಗುಮ್ಮನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮಂಜುನಾಥ್ ಅವರಿಗೆ ನಿನ್ನೆ ರಾತ್ರಿ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆಯೇ ಮಂಜುನಾಥ್ ಕೊನೆಯುಸಿರೆಳೆದಿದ್ದಾರೆ.
ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲೆ ಜಿಲ್ಲೆಗಳಲ್ಲಿಯೂ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದ್ದು, ಆತಂಕಕ್ಕೆ ಕಾರಣವಗಿದೆ.