HomeLatest NewsBREAKING: ಮುಂದುವರೆದ ಹೃದಯಾಘಾತ: ಮಂಡ್ಯದಲ್ಲಿ ಹಾರ್ಟ್ ಅಟ್ಯಾಕ್ ಗೆ ಮತ್ತೋರ್ವ ಬಲಿ

BREAKING: ಮುಂದುವರೆದ ಹೃದಯಾಘಾತ: ಮಂಡ್ಯದಲ್ಲಿ ಹಾರ್ಟ್ ಅಟ್ಯಾಕ್ ಗೆ ಮತ್ತೋರ್ವ ಬಲಿ

ಮಂಡ್ಯ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಂಡ್ಯ ಜಿಲ್ಲೆಯಲ್ಲಿ ಹಾರ್ಟ್ ಅಟ್ಯಾಕ್ ಗೆ 44 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ.

ಮಂಜುನಾಥ್ (44) ಮೃತ ದುರ್ದೈವಿ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಗುಮ್ಮನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮಂಜುನಾಥ್ ಅವರಿಗೆ ನಿನ್ನೆ ರಾತ್ರಿ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆಯೇ ಮಂಜುನಾಥ್ ಕೊನೆಯುಸಿರೆಳೆದಿದ್ದಾರೆ.

ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲೆ ಜಿಲ್ಲೆಗಳಲ್ಲಿಯೂ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದ್ದು, ಆತಂಕಕ್ಕೆ ಕಾರಣವಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular