ದಾವಣಗೆರೆ: ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿಯೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಹಾಸನ ಜಿಲ್ಲೆಯಲ್ಲಂತೂ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದೆ. ಈ ನಡುವೆ ಶಿವಮೊಗ್ಗ, ಕಲಬುರಗಿ ಜಿಲ್ಲೆಗಳಲ್ಲಿಯೂ ಹೃದಯಾಘಾತದಿಂದ ಸಣ್ಣವಯಸ್ಸಿನವರು ಸಾವನ್ನಪ್ಪಿದ್ದಾರೆ. ಇದೀಗ ದಾವಣಗೆರೆಯಲ್ಲಿಯೂ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
44 ವರ್ಷದ ಜಯಜಪ್ಪ ಮೃತ ದುರ್ದೈವಿ. ತಡ ರಾತ್ರಿ 11:30 ಗಂಟೆ ಸುಮಾರಿಗೆ ಜಯಪ್ಪ ಎಂಬುವವರಿಗೆ ಎದೆನೋವು ಕಾಣಿಸಿಕೊಂಡಿದೆ. ನಡೆದುಕೊಂಡೇ ಅವರು ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಕೆಲ ದಿನಗಳಿಂದ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದಿಂದ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕಳೆದ 40 ದಿನಗಳಿಂದ ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.