ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತದಿಂದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಜ್ಞರ ಸಭೆ ನಡೆಸಿದ್ದು, ಸಭೆ ಬಳಿಕ ಮಾತನಾಡಿದ ಸಚಿವರು, ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೋವಿಡ್ ನಿಂದ ಸ್ವಲ್ಪ ಮಟ್ಟಿಗೆ ಹೃದಯಾಘಾತ ಹೆಚ್ಚಾಗಿದೆ. ಆದರೆ ಕೋವಿಡ್ ಲಸಿಕೆಯಿಂದ ಹೃಯದಾಯಾಘಾತ ಸಂಭಿಸಿಲ್ಲ. ಕೋವಿಡ್ ಬಂದ ಒಂದು ವರ್ಷದೊಳಗೆ ರಕ್ತನಾಳ ಬ್ಲಾಕೇಜ್ ಆಗುತ್ತದೆ. ಆದರೆ ಮೂರು ವರ್ಷಗಳ ನಂತರ ಅದರ ಪರ್ಣಾಮ ಅಷ್ಟರಮಟ್ಟಿಗೆ ಇರಲ. ಹೃದಯಾಘಾತಕ್ಕೆ ಲಸಿಕೆ ಕಾರಣವಲ್ಲ. ಕೋವಿಡ್ ಲಸಿಕೆಯಿಂದ ಜನರಿಗೆ ಅನುಕೂಲವಾಗಿದೆ ಎಂದರು.
ಹೃದಯಾಘಾತವನ್ನು ‘ಸಡನ್ ಡೆತ್ ಅಧಿಸೂಚಿತ ಕಾಯಿಲೆ’ ಎಂದು ಘೋಷಣೆ ಮಾಡುತ್ತೇವೆ ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಮಾಡುವುದು ಕಡ್ಡಾಯ. ಹೃದಯಾಘಾತಕ್ಕೆ ಪ್ರತ್ಯೇಕ ಪಠ್ಯ ಅಳವಡಿಕೆ ಮಾಡಲಾಗುವುದು. ಮುಂದಿನ ವರ್ಶದಿಂದ ಶಿಕ್ಷಣ ಇಲಾಖೆ ಈ ಪಠ್ಯ ಅಳವಡಿಸಲಿದೆ ಎಂದು ತಿಳಿಸಿದರು.