HomeKarnatakaBREAKING NEWS: ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿ ಸಾವು

BREAKING NEWS: ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿ ಸಾವು

ಬಾಗಲಕೋಟೆ: ಚುನಾವಣಾ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದ ಬಸ್ ನಿಲ್ದಾಣದ ಬಳಿ ನಡೆದಿದೆ.

ಗೋವಿಂದಪ್ಪ ಸಿದ್ದಾಪುರ ಮೃತ ಚುನಾವಣಾ ಸಿಬ್ಬಂದಿ. ಬಿದರಿ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದ ಗೋವಿಂದಪ್ಪ ಸಿದ್ದಾಪುರ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆಂದು ಮೈಗೂರು ಪ್ರಾಥಮಿಕ ಶಾಲೆಯ ಮತಗಟ್ಟೆಗೆ ತೆರಳುತ್ತಿದ್ದಾಗ ಏಕಾಏಕಿ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular