ಕೊಪ್ಪಳ: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದೆ. 26 ವರ್ಷದ ಯುವತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಮಂಜುಳಾ ಹೂಗಾರ್ ಮೃತ ಯುವತಿ. ಕೊಪ್ಪಳದ ಶಿವಗಂಗಾ ಲೇಔಟ್ ನಿವಾಸಿ. ಮಂಜುಳಾ ಅವರಿಗೆ ಲೋ ಬಿಪಿಯಾಗಿತ್ತು. ಇದರಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಮಂಜುಳಾ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಕೆಲಸ ಬಿಟ್ಟು ಊರಿಗೆ ಹೋಗಿದ್ದರು. ಇದೀಗ ಏಕಾಏಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.