ತಿರುವನಂತಪುರಂ: ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಹೃದಯಾಘಾತದಿಂದ ಒಂದೇ ದಿನ ಇಬ್ಬರು ಮೃತಪಟ್ಟಿರುವ ಗಹ್ಟನೆ ನಡೆದಿದೆ.
ಎರಡು ಪ್ರತ್ಯೇಕ ಪ್ರಕರಣದಲ್ಲಿ ಈ ಘಟನೆ ನಡೆದಿದೆ. ಕೇರಳದ ಕೊಚ್ಚಿಯಲ್ಲಿ ರಾಜ್ (42) ಎಂಬುವರು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಮಹಾರಾಷ್ಟ್ರದ ಪುಣೆಯಲ್ಲಿ ಮಿಲಿಂದ್ ಕುಲಕರ್ಣಿ (37) ಎಂದಿನಂತೆ ಜಿಮ್ ನಲ್ಲಿ ಬೆವರಿಳಿಸುತ್ತಿರುವಾಗಲೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮಿಲಿಂದ್ ಕುಲಕರ್ಣಿ ಕಳೆದ ಆರು ತಿಂಗಳಿಂದ ಪುಣೆಯ ಪಿಂಪ್ರಿ ಚಿಂಚ್ವಾಡದ ಜಿಮ್ ಗೆ ತೆರಳುತ್ತಿದ್ದರು. ಜಿಮ್ ನಲ್ಲಿ ವರ್ಕೌಟ್ ಮುಗಿಸಿ ನೀರು ಕುಡಿದ ಬಳಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಿ ಅವರು ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ವರದಿಗಳ ಪ್ರಕಾರ ವೈದ್ಯೆಯಾಗಿದ್ದ ಮಿಲಿಂದ್ ಅವರ ಪತ್ನಿ ಕೂಡ ಕೆಲ ದಿನಗಳ ಹಿಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು ಎನ್ನಲಾಗಿದೆ.