ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಬೆಂಗಳೂರಿನಲ್ಲಿ ಹೃದಯಾಘಾತದಿಂದ ಹೆಡ್ ಕಾನ್ಸ್ ಟೇಬಲ್ ಓರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೇಗೂರು ಠಾಣೆಯ ಹೆಡ್ ಕಾನ್ಸ್ ಟೇಬಲ್ ನಿಜಾಮುದ್ದೀನ್ (44) ಮೃತ ದುರ್ದೈವಿ. ನಿಜಾಮುದ್ದೀನ್ ಆಡುಗೋಡಿ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ವಾಸವಾಗಿದ್ದರು. ಬೆಳಿಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಹೃದಯಾಘಾತದಿಂದ ನಿಜಾಮುದ್ದೀನ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.