ಮೈಸೂರು: ರಾಜ್ಯದಲ್ಲಿ ಹೃದಯಾಘಾತದಿಂದ ಸಾವಿನ ಸರಣಿ ಮುಂದುವರೆದಿದೆ. 35 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಪುರುಷೋತ್ತಮ (35) ಮೃತ ದುರ್ದೈವಿ. ಮೈಸೂರು ಜಿಲ್ಲೆಯ ಟಿ.ನರಸಿಪುರ ತಾಲೂಕಿನ ಕೂಡ್ಲುರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮುಖ ತೊಳೆಯುತ್ತಿದ್ದ ವ್ಯಕ್ತಿ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.
ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.