HomeKarnatakaBREAKING NEWS: ಹೃದಯಾಘಾತ: ಕಾಲೇಜಿನ ಮುಂದೆಯೇ ಕುಸಿದುಬಿದ್ದು ಪಿಯುಸಿ ವಿದ್ಯಾರ್ಥಿ ಸಾವು

BREAKING NEWS: ಹೃದಯಾಘಾತ: ಕಾಲೇಜಿನ ಮುಂದೆಯೇ ಕುಸಿದುಬಿದ್ದು ಪಿಯುಸಿ ವಿದ್ಯಾರ್ಥಿ ಸಾವು

ತುಮಕೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಚಿಕ್ಕಮಕ್ಕಳು, ಯುವಕರು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಆತಂಕ ಸೃಷ್ಟಿಸುತ್ತಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಕಾಲೇಜಿನ ಮುಂದೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದಿದೆ.

ಶಮಂತ್ (17) ಮೃತ ವಿದ್ಯಾರ್ಥಿ. ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ಕಾಲೇಜಿನ ಮುಂದೆ ಸ್ನೇಹಿತರ ಜೊತೆ ಮಾತನಾಡುತ್ತಿದ್ದ ಶಮಂತ್ ಏಕಾಏಕಿ ಕುಸಿದುಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆಯೇ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ.

ಚನ್ನಾಗಿ ವಿದ್ಯಾಭ್ಯಾಸ ಮಾಡಿ, ಭವಿಷ್ಯ ರೂಪಿಸಿಕೊಳ್ಳಬೇಕಿದ್ದ ಯುವಕ ಹೃದಯಾಗಾತದಿಂದ ಸಾವನ್ನಪ್ಪಿದ್ದು, ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular