ರಾಯಚೂರು: ಜಮೀನಿನಲ್ಲಿ ಕೆಲಸ ಮಾಡುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದ ರೈತ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿಯೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ರಾಯಚೂರು ಜಿಲ್ಲೆಯ ಡಿ.ರಾಂಪುರದಲ್ಲಿ ರೈತರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಉಪ್ಪರ ವೆಂಕಟೇಶ್ (45) ಹೃದಯಗಹಾತಕ್ಕೆ ಬಲಿಯಾದವರು. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೆಂಕಟೇಶ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಕುಟುಂಬದವರು ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ವೆಂಕಟೇಶ್ ಆರೋಗ್ಯವಾಗಿಯೇ ಇದ್ದರು. ಯಾವುದೇ ಸಮಸ್ಯೆಯೂ ಇರಲಿಲ್ಲ. ಇದೀಗ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಕುಟುಂಬದವರು ಆಘಾತಕ್ಕೊಳಗಾಗಿದ್ದಾರೆ.