BIG NEWS: ಹೃದಯಾಘಾತ: ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ವಿಧಿವಶ

ಚಾಮರಾಜನಗರ: ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಜನನಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಜಯಣ್ಣ ಮೃತಪಟ್ಟಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಕೊಳ್ಳೇಗಾಲ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದ ಜಯಣ್ಣ, ಸಿಎಂ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಕೊಳ್ಳೆಗಾಲ ಭಾಗದ ಪ್ರಭಾವಿ ರಾಜಕಾರಣಿಯಾಗಿದ್ದರು. ಕೆಲ ದಿನಗಳ ಹಿಂದಷ್ಟೇ ಮನೆ ಗೃಹಪ್ರವೇಶ ಮಾಡಿದ್ದ ಜಯಣ್ಣ, ಇದೀಗ ಹೃದಯಾಘಾತದಿಂದ ನಿಧನರಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read