ಮಂಡ್ಯ: ಗೌರಿ-ಗಣೇಶ ಹಬ್ಬಕ್ಕೆಂದು ಬಟ್ಟೆ ಖರೀದಿಗೆ ಅಂಗಡಿಗೆ ಬಂದಿದ್ದ ಪಿಯುಸಿ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಚಿರಾಗ್ (17) ಮೃತ ವಿದ್ಯಾರ್ಥಿ. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಹಬ್ಬಕ್ಕೆ ಬಟ್ಟೆ ಖರೀದಿಗಾಗಿ ತಂದೆ-ತಾಯಿ ಜೊತೆ ಅಂಗಡಿಗೆ ಹೋಗಿದ್ದ. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆಯೇ ಚಿರಾಗ್ ಸಾವನ್ನಪ್ಪಿದ್ದಾನೆ.
ಹಬ್ಬದ ಸಂಭ್ರಮದಲ್ಲಿದ್ದ ಪೋಷಕರು ಮಗನನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.