HomeLatest NewsBIG NEWS: ಬಟ್ಟೆ ಖರೀದಿಗೆ ಅಂಗಡಿಗೆ ಬಂದಿದ್ದ ವಿದ್ಯಾರ್ಥಿ: ಹೃದಯಾಘಾತದಿಂದ ಕುಸಿದು ಬಿದ್ದು ಸಾವು

BIG NEWS: ಬಟ್ಟೆ ಖರೀದಿಗೆ ಅಂಗಡಿಗೆ ಬಂದಿದ್ದ ವಿದ್ಯಾರ್ಥಿ: ಹೃದಯಾಘಾತದಿಂದ ಕುಸಿದು ಬಿದ್ದು ಸಾವು

ಮಂಡ್ಯ: ಗೌರಿ-ಗಣೇಶ ಹಬ್ಬಕ್ಕೆಂದು ಬಟ್ಟೆ ಖರೀದಿಗೆ ಅಂಗಡಿಗೆ ಬಂದಿದ್ದ ಪಿಯುಸಿ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಚಿರಾಗ್ (17) ಮೃತ ವಿದ್ಯಾರ್ಥಿ. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಹಬ್ಬಕ್ಕೆ ಬಟ್ಟೆ ಖರೀದಿಗಾಗಿ ತಂದೆ-ತಾಯಿ ಜೊತೆ ಅಂಗಡಿಗೆ ಹೋಗಿದ್ದ. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆಯೇ ಚಿರಾಗ್ ಸಾವನ್ನಪ್ಪಿದ್ದಾನೆ.

ಹಬ್ಬದ ಸಂಭ್ರಮದಲ್ಲಿದ್ದ ಪೋಷಕರು ಮಗನನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular