ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿಕ್ಷಕರೊಬ್ಬರು ಶಾಲೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕುರುಪ್ಪಲ್ಲಿ ಗ್ರಾದಲ್ಲಿ ಈ ಘಟನೆ ನಡೆದಿದೆ, ಮಂಜುನಾಥ್ (50) ಮೃತ ಶಿಕ್ಷಕ. ಶಾಲೆಯಲ್ಲಿ ಎಂದಿನಂತೆ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾಗಲೇ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಶಿಕ್ಷಕ ಮಂಜುನಾಥ್, ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮಂಜುನಾಥ್ ಕುರುಪ್ಪಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದರು.