ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದೆ. ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಭಕ್ತನಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಲೋಚನಾ (49) ಮೃತ ಶಿಕ್ಷಕಿ.
ತೀವ್ರ ಎದೆನೋವಿನಿಂದ ಮನೆಯಲ್ಲಿಯೇ ಕುಸಿದು ಬಿದ್ದ ಸುಲೋಚನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸುಲೋಚನಾ, ನೆಲಮಂಗಲದ ಬಸವಣ್ಣ ದೇವರ ಮಠದ ಶಾಲೆಯ ಶಿಕ್ಷಕಿಯಾಗಿದ್ದರು.