ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಕುಳಿತ ಜಾಗದಲ್ಲೇ, ನಡೆದಾಡುತ್ತಿದ್ದಾಗಲೇ, ಕೆಲಸ ಕಾರ್ಯಗಳಲ್ಲಿ ತೊಡಗಿರುವಾಗಲೇ ಇದ್ದಕ್ಕಿದ್ದಂತೆ ಜನರು ಕುಸಿದು ಬಿದ್ದು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಆಸ್ಪತ್ರೆಯಲ್ಲಿರುವಾಗಲೇ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ದಾಕ್ಷಾಯಿಣಿ (50) ಮೃತ ಮಹಿಳೆ. ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ವಾರದ ಹಿಂದೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ದಾಕ್ಷಿಣಿ, ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪದೆಯುತ್ತಿದ್ದರು. ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದರು.
ಆಸ್ಪತ್ರೆಯ ವಾರ್ಡ್ ನಲ್ಲಿ ನಡೆದಾಡುತ್ತಿದ್ದಾಗಲೇ ದಾಕ್ಷಾಯಿಣಿ ಅವರಿಗೆ ಹೃದಯಾಘಾತವಾಗಿದೆ. ಇದ್ದಕ್ಕಿದ್ದಂತೆ ಕುಸಿದು ಬಿದ್ದವರು ಕೊನೆಯುಸಿರೆಳೆದಿದ್ದಾರೆ.