ಕೊಪ್ಪಳ: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದೆ. ಯೋಗ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬಹದ್ದೂರ್ ಬಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಂತವೀರಸ್ವಾಮಿ ಗಂಗಾಧರ ಮಠ (57) ಮೃತರು. ಹಿರೇಬೆನಕಲ್ ಗ್ರಾಮದ ಮುಖ್ಯೋಪಾಧ್ಯಾಯರಾಗಿ ಹಾಗೂ ಯೋಗ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗಂಗಾಧರ ಮಠ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಈ ವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಐವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.