HomeLatest NewsBIG NEWS: ನಿಲ್ಲದ ಹೃದಯಾಘಾತ ಸಾವಿನ ಸರಣಿ: ಯೋಗ ಶಿಕ್ಷಕ ಹಾರ್ಟ್ ಅಟ್ಯಾಕ್ ಗೆ ಬಲಿ

BIG NEWS: ನಿಲ್ಲದ ಹೃದಯಾಘಾತ ಸಾವಿನ ಸರಣಿ: ಯೋಗ ಶಿಕ್ಷಕ ಹಾರ್ಟ್ ಅಟ್ಯಾಕ್ ಗೆ ಬಲಿ

ಕೊಪ್ಪಳ: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದೆ. ಯೋಗ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬಹದ್ದೂರ್ ಬಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಂತವೀರಸ್ವಾಮಿ ಗಂಗಾಧರ ಮಠ (57) ಮೃತರು. ಹಿರೇಬೆನಕಲ್ ಗ್ರಾಮದ ಮುಖ್ಯೋಪಾಧ್ಯಾಯರಾಗಿ ಹಾಗೂ ಯೋಗ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗಂಗಾಧರ ಮಠ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಈ ವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಐವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular