ಧಾರವಾಡ: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದೆ. ಸಣ್ಣ ವಯಸ್ಸಿನವರು ಕೂಡ ಹಾರ್ಟ್ ಅಟ್ಯಾಕ್ ಗೆ ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ನಡುವೆ 25 ವರ್ಷದ ಯುವತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
25 ವರ್ಷದ ಜೀವಿತಾ ಮೃತ ಯುವತಿ. ಧಾರವಾಡ ಜಿಲ್ಲೆಯ ಪುರೋಹಿತ ನಗರದ ನಿವಾಸಿ ಜೀವಿತಾ ಎಂಎಸ್ ಸಿ ಮುಗಿಸಿ ಯುಪಿಎಸ್ ಸಿಗಾಗಿ ತಯಾರಿ ನಡೆಸುತ್ತಿದ್ದಳು. ನಿನ್ನೆ ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಜೀವಿತಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಇನ್ನು ದಾವಣಗೆರೆಯಲ್ಲಿ 22 ವರ್ಷದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿಯೂ ಹೃದಯಾಘಾತದಿಂದ ಕೊನೆಯುಸಿರೆಳೆಯುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.