ಚಾಮರಾಜನಗರ: ನೈಟ್ ಡ್ಯೂಟಿ ಮುಗಿಸಿ ಮನೆಗೆ ವಾಪಾಸ್ ಆಗುತ್ತಿದ್ದಾಗ ಹಠಾತ್ ಹೃದಯಾಘಾತ ಸಭವಿಸಿ ಎಎಸ್ಐ ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ನಾಗನಾಯಕ ಹೃದಯಾಘಾತಕ್ಕೆ ಬಲಿಯಾದ ಎಎಸ್ಐ. ಸಂತೆಮಾರನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಡ್ಯೂಟಿ ಮುಗಿಸಿ ಮುಂಜಾನೆ ಮನೆಗೆ ವಾಪಾಸ್ ಆಗಿದ್ದರು. ಈ ವೇಳೆ ಮನೆಯಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.
ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆಯೇ ನಾಗನಾಯಕ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿದದರೆ ಎಂದು ತಿಳಿದುಬಂದುದೆ.

