HomeKarnatakaಮತ್ತೊಂದು ದುರಂತ; ಚುನಾವಣಾ ಕರ್ತವ್ಯದಲ್ಲಿದ್ದ ಪಶು ವೈದ್ಯಕೀಯ ಸಹಾಯಕ ನಿರ್ದೇಶಕ ಹೃದಯಾಘಾತದಿಂದ ಸಾವು

ಮತ್ತೊಂದು ದುರಂತ; ಚುನಾವಣಾ ಕರ್ತವ್ಯದಲ್ಲಿದ್ದ ಪಶು ವೈದ್ಯಕೀಯ ಸಹಾಯಕ ನಿರ್ದೇಶಕ ಹೃದಯಾಘಾತದಿಂದ ಸಾವು

ರಾಮನಗರ: ಪಂಚಾಯಿತಿ ಚುನಾವಣೆಯ ಕರ್ತವ್ಯದಲ್ಲಿದ್ದ ಪಶು ವೈದ್ಯಕೀಯ ಸಹಾಯಕ ನಿರ್ದೇಶಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ರಾಮನಗರ ಜಿಲ್ಲೆಯಲ್ಲಿ ಒಂದೇ ದಿನದಲ್ಲಿ ಇಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಅಟೆಂಡರ್ ಓರ್ವರು ಕುಳಿತಲ್ಲೇ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಪಶು ವೈದ್ಯಕೀಯ ಸಹಾಯಕ ನಿರ್ದೇಶಕರು ಹೃದಾಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮನಗರದ ಮಾಡಬಾಳು ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಬುಗೌಡ (54) ಎಂಬುವವರಿಗೆ ಎರಡು ದಿನಗಳ ಹಿಂದೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಎರಡು ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಬುಗೌಡ ಚಿಕಿತ್ಸೆ ಫಲಕಾರಿಯಗದೇ ಇಂದು ಕೊನೆಯುಸಿರೆಳೆದಿದ್ದಾರೆ. ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular