ಮೈಸೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಹೃದಯಗಹಾತ ಸಂಭವಿಸಿ ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಪಿ.ಜೆ.ಆನಂದ್ ಹೃದಯಾಘಾತಕ್ಕೆ ಬಲಿಯಾದ ಕ್ಷೇತ್ರ ಶಿಕ್ಷಣಾಧಿಕಾರಿ. ಮೈಸೂರಿನಿಂದ ಕೊಡಗು ಜಿಲ್ಲೆಯ ವಿರಾಜಪೇಟೆಗೆ ತೆರಳಲು ಬಸ್ ಹತ್ತಿದ್ದರು. ಇಲವಾಲಬಳಿ ಬಸ್ ಬರುತ್ತಿದ್ದಂತೆ ಪಿ.ಜೆ.ಆನಂದ್ ಅವರಿಗೆ ಹೃದಯಾಘಾತ ಸಂಭವಿಸಿದೆ.
ತಕ್ಷಣ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆಯೇ ಆನಂದ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

