HomeLatest Newsನಿದ್ದೆಗೆ ಜಾರಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಆರೋಗ್ಯ ಇಲಾಖೆ ನೌಕರ

ನಿದ್ದೆಗೆ ಜಾರಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಆರೋಗ್ಯ ಇಲಾಖೆ ನೌಕರ

ಹಾಸನ: ರಾಜ್ಯದಲ್ಲಿ ಮತ್ತೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಿದ್ದೆಗೆ ಜಾರಿದ್ದಾಗಲೇ ಆರೋಗ್ಯ ಇಲಾಖೆ ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ.

ಗವೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 42 ವರ್ಷದ ದೇವಾನಂದ್ ಮೃತ ದುರ್ದೈವಿ. 15 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವಾಹನ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದರು.

ದೇವಾನಂದ್ ಅವರಿಗೆ ಇಂದು ಬೆಳಗಿನ ಜಾವ ಮಲಗಿದ್ದಲಿಯೇ ಹೃದಯಾಘಾತವಾಗಿದೆ. ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ದೇವಾನಂದ್ ಅವರು ಪೌರಾಟಿಕ ನಾಟಕಗಳಲ್ಲಿ ಕೂಡ ಅಭಿನಯಿಸುತ್ತಿದ್ದರು. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular