HomeKarnatakaBIG NEWS: ಬಸ್ ನಲ್ಲಿಯೇ ಹೃದಯಾಘಾತ; ಪ್ರಯಾಣಿಕ ದುರ್ಮರಣ

BIG NEWS: ಬಸ್ ನಲ್ಲಿಯೇ ಹೃದಯಾಘಾತ; ಪ್ರಯಾಣಿಕ ದುರ್ಮರಣ

ಮೈಸೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಉಸಿರು ಚಲ್ಲುತ್ತಿರುವ ಪ್ರಕರಣ ವರದಿಯಾಗುತ್ತಲೇ ಇದೆ. ಪ್ರಯಾಣಿಕರೊಬ್ಬರು ಬಸ್ ನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ನಂಜನಗೂಡಿನಿಂದ ಚುಂಚನಹಳ್ಳಿಗೆ ತೆರಳುತ್ತಿದ್ದ ಪ್ರಯಾಣಿಕನಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದ್ದು, ಬಸ್ ನಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುಂಚನಹಳ್ಳಿ ನಿವಾಸಿ ಸುರೇಶ್ (50) ಮೃತ ವ್ಯಕ್ತಿ. ಕಲವಂದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ಈ ವರೆಗೂ ಯಾರೂ ಪ್ರಕರಣ ದಾಖಲಿಸಿಲ್ಲ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular