ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಲಾಡ್ಜ್ ರೂಮ್ ನಲ್ಲಿದ್ದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮುರುಗನ್ ಮಧು (35) ಮೃತ ದುರ್ದೈವಿ. ಕೃಷ್ಣಗಿರಿ ಜಿಲ್ಲೆ ಪುಳಿಯಂಪಟ್ಟಿ ನಿವಾಸಿಯಾಗಿರುವ ಮಧು, ಲಾಡ್ಜ್ನಲ್ಲಿ ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಲಾಡ್ಜ್ ಮಾಲೀಕರು ನೀಡಿದ ದೂರಿನ ಮೇರೆಗೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೃಷ್ಣಗಿರಿ ಜಿಲ್ಲೆಯ ಪುಳಿಯಂಪಟ್ಟಿ ನಿವಾಸಿ ಮಧು ಅವಿವಾಹಿತನಾಗಿದ್ದು, ತಾಯಿಯೊಂದಿಗೆ ವಾಸವಾಗಿದ್ದರು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿಂದೆ ಎರಡು ಬಾರಿ ಲಘು ಹೃದಯಾಘಾತ ಸಂಭವಿಸಿತ್ತು. ಮೇ 18ರಂದು ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಿ ಬರುವುದಾಗಿ ತಾಯಿ ಬಳಿ ಹೇಳಿದ್ದರು. ಇದರಂತೆ ಮಡಿವಾಳದ ಗೋಲ್ಡನ್ ನೆಕ್ಸ್ ಎಂಬ ಲಾಡ್ಜ್ ನಲ್ಲಿ ತಂಗಿದ್ದರು ಈ ವೇಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ಧಾರೆ.
ಫಜಿ ಉಲ್ಲಾ ಖಾನ್ ಎಂಬಾತನ ಹೆಸರಿನಲ್ಲಿದ್ದ ರೂಂ ನಲ್ಲಿ ತಂಗಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದಾರೆ.

