HomeLatest NewsSHOCKING : ಮಕ್ಕಳಲ್ಲಿ ಹೆಚ್ಚುತ್ತಿದೆ ಹೃದಯಾಘಾತ : ಆಟವಾಡುವಾಗಲೇ ಕುಸಿದು ಬಿದ್ದು 9 ನೇ...

SHOCKING : ಮಕ್ಕಳಲ್ಲಿ ಹೆಚ್ಚುತ್ತಿದೆ ಹೃದಯಾಘಾತ : ಆಟವಾಡುವಾಗಲೇ ಕುಸಿದು ಬಿದ್ದು 9 ನೇ ತರಗತಿ ವಿದ್ಯಾರ್ಥಿನಿ ಸಾವು.!

ಬೆಳಗಾವಿ: ಇತ್ತೀಚೆಗಂತೂ ಮಕ್ಕಳಲ್ಲಿ ಹೃದಯಾಘಾತ ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಆಟವಾಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಹೌದು. ಶಾಲೆಯಲ್ಲಿ ಆಟವಾಡುವಾಗ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ.

ಮೃತಳನ್ನು ಬೇಡರಹಟ್ಟಿ ಗ್ರಾಮದ ರೇಣುಕಾ ಸಂಜಯ ಬಂಡಗಾರ(15) ಎಂದು ಗುರುತಿಸಲಾಗಿದೆ. ಈತ ಚಮಕೇರಿ ಗ್ರಾಮದ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು. ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೂಡಲೇ ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿನಿಯನ್ನು ಅಥಣಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ರೇಣುಕಾ ಮೃತಪಟ್ಟಿದ್ದಾರೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular