HomeLatest NewsSHOCKING : ಯುವಜನತೆಯಲ್ಲಿ ಹೆಚ್ಚುತ್ತಿದೆ ಹೃದಯಾಘಾತ : ರಾಜ್ಯದಲ್ಲಿ ಒಂದೇ ವಾರದಲ್ಲಿ ಮೂವರು ಸಾವು.!

SHOCKING : ಯುವಜನತೆಯಲ್ಲಿ ಹೆಚ್ಚುತ್ತಿದೆ ಹೃದಯಾಘಾತ : ರಾಜ್ಯದಲ್ಲಿ ಒಂದೇ ವಾರದಲ್ಲಿ ಮೂವರು ಸಾವು.!

ಬೆಂಗಳೂರು : ಯುವಜನತೆಯಲ್ಲಿ ಹೃದಯಾಘಾತ ಹೆಚ್ಚಾಗಿ ಸಂಭವಿಸುತ್ತಿದ್ದು, ರಾಜ್ಯದಲ್ಲಿ ಒಂದೇ ವಾರದಲ್ಲಿ ಮೂವರು ಬಲಿಯಾಗಿದ್ದಾರೆ.

1) ಹಾಸನದಲ್ಲಿ ಪದವಿ ವಿದ್ಯಾರ್ಥಿನಿ ಬಲಿ
ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರ ಕವನ ಕೆವಿ (21) ಎಂದು ಗುರುತಿಸಲಾಗಿದೆ.

ಈಕೆ ಹಾಸನ ನಗರದಲ್ಲಿ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಗೆ ಧಿಡೀರ್ ಆಗಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆಕೆ ಕುಸಿದು ಬಿದ್ದಿದ್ದಾಳೆ. ಪೋಷಕರು ತಕ್ಷಣ ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಅಷ್ಟರಲ್ಲೇ ಕವನ ಮೃತಪಟ್ಟಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ


2) ಬಾತ್ ರೂಂನಲ್ಲೇ ಕುಸಿದುಬಿದ್ದು ಯುವತಿ ಸಾವು

ಹಾಸನ : ಬಾತ್ ರೂಂನಲ್ಲೇ ಕುಸಿದುಬಿದ್ದು ಯುವತಿ ಸಾವನ್ನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ.ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಮೃತಳನ್ನು ಸಂಧ್ಯಾ (19) ಎಂದು ಗುರುತಿಸಲಾಗಿದೆ.

ಮಡಿವಾಳ ಬಡಾವಣೆ ನಿವಾಸಿಯಾದ ವೆಂಕಟೇಶ್ ಹಾಗೂ ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಮೃತಪಟ್ಟಿದ್ದಾಳೆ. ಈಕೆ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದು, ಬಾತ್ ರೂಂಗೆ ತೆರಳಿದ ವೇಳೆ ಕುಸಿದು ಬಿದ್ದಿದ್ದಾಳೆ. ತುಂಬಾ ಹೊತ್ತಾದರೂ ಮಗಳು ಬಾತ್ ರೂಂನಿಂದ ಬಾರದ ಹಿನ್ನೆಲೆ ಆತಂಕಗೊಂಡ ಪೋಷಕರು ಬಾಗಿಲು ಒಡೆದಿದ್ದಾರೆ. ಯುವತಿ ಕುಸಿದು ಬಿದ್ದಿರುವುದನ್ನು ನೋಡಿದ ಪೋಷಕರು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ, ಆದರೆ ಅಷ್ಟರಲ್ಲೇ ಯುವತಿ ಮೃತಪಟ್ಟಿದ್ದಾಳೆ.

3) ಬೆಂಗಳೂರಿನಲ್ಲಿ ಕ್ಯಾಬ್ ಚಾಲಕ ಸಾವು

ಬೆಂಗಳೂರು : ನಿಂತಲ್ಲೇ ಹೃದಯಾಘಾತ ಸಂಭವಿಸಿ ಕ್ಯಾಬ್ ಚಾಲಕ ಮೃತಪಟ್ಟ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ.

ಮೃತನನ್ನು ಅರಕಲಗೂಡ ತಾಲೂಕಿನ ಕಾಡನೂರು ಗ್ರಾಮದ ಅಭಿಷೇಕ್ (19) ಎಂದು ಗುರುತಿಸಲಾಗಿದೆ. ಗ್ರಾಮದ ಅನುಸೂಯ ಹಾಗೂ ರಾಮಕೃಷ್ಣ ದಂಪತಿ ಪುತ್ರ ಎಂದು ಹೇಳಲಾಗಿದೆ. ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಬಸವೇಶ್ವರ ನಗರದಲ್ಲಿ ನಿಂತಿದ್ದ ಜಾಗದಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಅಷ್ಟರಲ್ಲೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ . ಮಗನನ್ನು ಕಳೆದುಕೊಂಡ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular