HomeLatest NewsHEART ATTCK: ಹೊಸ ವರ್ಷಾಚರಣೆಗೆ ಗೋವಾಗೆ ಹೋಗಿದ್ದ ಯುವಕ ಹೃದಯಾಘಾತದಿಂದ ಸಾವು

HEART ATTCK: ಹೊಸ ವರ್ಷಾಚರಣೆಗೆ ಗೋವಾಗೆ ಹೋಗಿದ್ದ ಯುವಕ ಹೃದಯಾಘಾತದಿಂದ ಸಾವು

ಹಾಸನ: ಹೊಸ ವರ್ಷದ ಸಂಭ್ರಮಾಚರಣೆಗೆ ಗೋವಾಕ್ಕೆ ತೆರಳಿದ್ದ ಹಾಸನ ಮೂಲದ ಯುವಕ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.

ಹೊಸ ವರ್ಷಾಚಾರಣೆಗಾಗಿ ಗೋವಾ ಪ್ರವಾಸಕ್ಕೆ ಹೋಗಿದ್ದ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊಸಳ್ಳಿ ಗ್ರಾಮದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 26ವರ್ಷದ ರಕ್ಷಿತ್ ಮೃತ ದುರ್ದೈವಿ.

ಸಂಬಂಧಿಕರು ಹಾಗೂ ಸಹೋದರರ ಜೊತೆ ಡಿಸೆಂಬರ್ 31ರಂದು ರಕ್ಷಿತ್ ಗೋವಾಕ್ಕೆ ಹೋಗಿದ್ದರು. ಗೋವಾದಲ್ಲಿ ಭರ್ಜರಿಯಾಗಿ ನ್ಯೂ ಇಯರ್ ಪಾರ್ಟಿ ಮಾಡಿದ್ದರು. ಜನವರಿ 1ರಂದು ಬೆಳಿಗ್ಗೆ ತಿಂಡಿ ಮುಗಿಸಿ ರಕ್ಷಿತ್, ಸಹೋದರರಾದ ಚಿದಂಬರಂ, ಪ್ರವೀಣ್ ಜೊತೆ ಗೋವಾದಲ್ಲಿ ತಿರುಗಾಡುತ್ತಿದ್ದರು. ಈ ವೇಳೆ ರಕ್ಷಿತ್ ಹಠಾತ್ ಹೃದಯಾಘಾತಕ್ಕೊಳಗಾಗಿದ್ದಾರೆ. ತೀವ್ರ ಎದೆನೊವಿನಿಂದ ಬಳಲುತ್ತಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸ್ಪತ್ರೆಗೆ ಕರೆದೊಯ್ದರು ರಕ್ಷಿತ್ ಬದುಕಲಿಲ್ಲ. ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಗೋವಾದಿಂದ ಮೃತದೇಹವನ್ನು ಸ್ವಗ್ರಾಮಕ್ಕೆ ತರಲಾಗಿದೆ. ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.

For Latest News Updates, Join Our Whatsapp Community🚩
RELATED ARTICLES

Most Popular