HomeLatest NewsBIG NEWS: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಮತ್ತೊಂದು ದುರಂತ: ಡಿಜೆ ಸಾಂಗ್ ಗೆ ಡಾನ್ಸ್...

BIG NEWS: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಮತ್ತೊಂದು ದುರಂತ: ಡಿಜೆ ಸಾಂಗ್ ಗೆ ಡಾನ್ಸ್ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೆ ಯುವಕ ಸಾವು

ರಾಯಚೂರು: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಡಾನ್ಸ್ ಮಾಡುತ್ತಲೇ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಎರಡು ಮೂರು ದಿನಗಳಿಂದ ಹೆಚ್ಚುತ್ತಿದೆ. ಗನೇಶ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಭರ್ಜರಿ ಡ್ಯಾನ್ಸ್ ಮಾಡುತ್ತಿರುವಾಗಲೇ ಯುವಕನೊಬ್ಬ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ.

ಮಂಗಳವಾರ ಪೇಟೆಯ ಯುವಕ ಅಭಿಷೇಕ್ (24) ಮೃತ ದುರ್ದೈವಿ. ರಾತ್ರಿ ಬೆಳಗಾಗುವವರೆಗೂ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿದ್ದ ಅಭಿಷೇಕ್ ಇಂದು ಬೆಳಗಿನಜಾವ ಮಾರ್ಗ ಮಧ್ಯೆ ತೀನ್ ಖಂದಿಲ್ ಸರ್ಕಲ್ ಬಳಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅಭಿಷೇಕ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ರಾಯಚೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular