HomeLatest NewsBIG NEWS : ಮುಂದಿನ 'ಶೈಕ್ಷಣಿಕ ವರ್ಷ'ದಿಂದ ಪಠ್ಯ ಪುಸ್ತಕಗಳಲ್ಲಿ ಹೃದಯದ ಪಾಠ : ರಾಜ್ಯ...

BIG NEWS : ಮುಂದಿನ ‘ಶೈಕ್ಷಣಿಕ ವರ್ಷ’ದಿಂದ ಪಠ್ಯ ಪುಸ್ತಕಗಳಲ್ಲಿ ಹೃದಯದ ಪಾಠ : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ.!

ಬೆಂಗಳೂರು : ಮುಂದಿನ ವರ್ಷದಿಂದ ಪಠ್ಯ ಪುಸ್ತಕಗಳಲ್ಲಿ ಹೃದಯಾಘಾತದ ಕುರಿತಾದ ವಿಚಾರ ಅಳವಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಯುವ ವರ್ಗದಲ್ಲಿ ಹೃದಯಾಘಾತ, ಹಠಾತ್ ಸಾವು ಸಂಭವಿಸುತ್ತಿರುವ ಕಾರಣ ಮುಂದಿನ ಶೈಕ್ಷಣಿಕ ವರ್ಷದಿಂದ ಹೃದಯಾಘಾತ ಹಾಗೂ ಹೃದಯದ ಆರೋಗ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ವಿಚಾರವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಲು ಚಿಂತನೆ ನಡೆದಿದೆ. ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಕೈಗೊಳ್ಳಲಿರುವ ಎಲ್ಲ ಕ್ರಮಗಳ ಕುರಿತು ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ ಮುಂದುವರಿಯಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಸಂಭವಿಸುವ ಹಠಾತ್ ಸಾವನ್ನು ಇನ್ನು ಮುಂದೆ ಅಧಿಸೂಚಿತ ಕಾಯಿಲೆ ಎಂದು ಪರಿಗಣಿಸಲು ಹಾಗೂ ಆಸ್ಪತ್ರೆಯಿಂದ ಹೊರಗೆ ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾನೂನಿನ ಪ್ರಕಾರ ಸರ್ಕಾರಕ್ಕೆ ವರದಿ ಮಾಡಬೇಕಾದ ಕಾಯಿಲೆಯನ್ನು ಅಧಿಸೂಚಿತ ಕಾಯಿಲೆ ಎಂದು ಕರೆಯಲಾಗುತ್ತದೆ. ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳು ಶಂಕಿತ ಮತ್ತು ದೃಢಪಟ್ಟ ಪ್ರಕರಣಗಳನ್ನು ಆರೋಗ್ಯ ಇಲಾಖೆಗೆ ಕಡ್ಡಾಯವಾಗಿ ವರದಿ ಮಾಡಬೇಕು ಎಂದು ಸರ್ಕಾರ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular