BIG NEWS: ರಾಜ್ಯಾದ್ಯಂತ ಬಸ್ ನಿಲ್ದಾಣ ಸೇರಿ ಸಾರ್ವಜನಿಕ ಸ್ಥಳಗಳಲ್ಲೂ ಹೃದಯ ಚಿಕಿತ್ಸೆ

ಬೆಂಗಳೂರು: ಹಠಾತ್ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳನ್ನು ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ.

ರಾಜ್ಯಾದ್ಯಂತ ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಆಟೋಮೇಟೆಡ್ ಎಕ್ಸ್ ಟರ್ನಲ್ ಡಿಫೈಬ್ರಿಲ್ಲೇಟರ್ಸ್(AED) ಸಾಧನಗಳನ್ನು ಅಳವಡಿಸಲಾಗುವುದು. ಯಾವುದೇ ವ್ಯಕ್ತಿಗೆ ಹೃದಯಘಾತವಾದ 90 ನಿಮಿಷಗಳಲ್ಲಿ ತುರ್ತು ಚಿಕಿತ್ಸೆ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ.

ಅಂದಹಾಗೆ, ಪ್ರತಿ ವರ್ಷ ರಾಜ್ಯದಲ್ಲಿ ಸುಮಾರು 96 ಸಾವಿರ ಮಂದಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಹೃದಯಾಘಾತ ಸಂಬಂಧಿಸಿದ ನಿಗದಿತ ಅವಧಿಯೊಳಗೆ ಚಿಕಿತ್ಸೆ ಒದಗಿಸಲು ಹೃದಯ ಸ್ನಾಯುವಿನ ಸೋಂಕು ನಿವಾರಣೆ –ಸ್ಟೆಮಿ ಯೋಜನೆಯನ್ನು ಆರೋಗ್ಯ ಇಲಾಖೆ ಜಾರಿಗೊಳಿಸಿದೆ. ಈ ಯೋಜನೆಡಿ ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್, ವಿಮಾನ ನಿಲ್ದಾಣ, ಕೋರ್ಟ್, ಶಾಪಿಂಗ್ ಮಾಲ್ ಸೇರಿದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ AED ಸಾಧನಗಳನ್ನು ಅಳವಡಿಸಲಾಗುವುದು. ನಿಗದಿತ ಸ್ಥಳದಲ್ಲಿನ ಸಿಬ್ಬಂದಿಗೆ ಸಾಧನಗಳ ನಿರ್ವಹಣೆ ಕುರಿತಾಗಿ ತರಬೇತಿ ನೀಡಲಾಗುತ್ತದೆ.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಸ್ಟೆಮಿ ಯೋಜನೆಡಿ ಮೊದಲ ಹಂತದಲ್ಲಿ ಬೆಂಗಳೂರು, ಮೈಸೂರು, ಕಲಬುರಗಿ ಆಸ್ಪತ್ರೆಗಳ ಬಳಸಿಕೊಂಡು ಸೇವೆ ನೀಡಲಾಗುತ್ತಿದೆ. ಪ್ರಸ್ತುತ 10 ಜಿಲ್ಲಾ ಆಸ್ಪತ್ರೆ, 24 ತಾಲ್ಲೂಕು ಆಸ್ಪತ್ರೆ ಸೇರಿದಂತೆ ವಿವಿಧ ಜನರಲ್ ಆಸ್ಪತ್ರೆ ಯೋಜನೆಯಡಿ ಕಾರ್ಯನಿರ್ವಹಿಸುತ್ತಿದ್ದು, ಇಂತಹ ಆಸ್ಪತ್ರೆಗಳಲ್ಲಿ ಎಇಡಿ ಸಾಧನ ಸೇರಿ ಸ್ಟೆಮಿ ಕಿಟ್ ಅಳವಡಿಸಲಾಗಿದೆ.

ಇದರಿಂದ ನಿಂತ ಹೃದಯ ಬಡಿತ ಮತ್ತೆ ಆರಂಭಿಸಲು ಸಹಕಾರಿಯಾಗುತ್ತದೆ. ಎದೆ ನೋವು ಕಾಣಿಸಿಕೊಂಡ, ಹೃದಯಾಘಾತಕ್ಕೆ ಒಳಗಾದ ಸುಮಾರು 57 ಸಾವಿರ ಮಂದಿಗೆ ಚಿಕಿತ್ಸೆ ನೀಡಲಾಗಿದೆ. ಹಠಾತ್ ಹೃದಯಾಘಾತಕ್ಕೆ ಒಳಗಾದವರಿಗೆ ತುರ್ತು ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿಯೂ ಎಇಡಿ ಸಾಧನ ಅಳವಡಿಸಲಾಗುತ್ತದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read