ಹಾಸನ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಚಿಕ್ಕಮಕ್ಕಳಿಂದ ಹಿಡಿದು ಹಿರಿಯವರವರೆಗೂ ಹೃದಯಘಾತ ಸಮಸ್ಯೆ ಹೆಚ್ಚುತ್ತಿದೆ.
ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ.
ಡಾ.ವೆಂಕಟೇಶ್ (55) ಮೃತ ಅಧಿಕಾರಿ. ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯವರಾದ ಡಾ.ವೆಂಕಟೇಶ್ ಕಳೆದ ಐದಾರು ವರ್ಷಗಳಿಂದ ಸಕಲೇಶಪುರದಲ್ಲಿ ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಬೆಂಗಳೂರಿನಲ್ಲಿ ಡಾ.ವೆಂಕಟೇಶ್ ಕುಟುಂಬ ನೆಲೆಸಿದ್ದು, ಸಕಲೇಶಪುರದಲ್ಲಿ ಒಬ್ಬರೇ ವಾಸವಿದ್ದರು. ಎನ್ನಲಾಗಿದೆ. ಸೆ.10 ರಂದು ಕೆಲಸ ಮುಗಿಸಿ ಮನೆಗೆ ತೆರಳಿದ್ದರು. ಇಂದು ಬೆಳಿಗ್ಗೆ ಎಷ್ಟು ಬಾರಿ ಫೋನ್ ಮಾಡಿದರೂ ಫೋನ್ ಸ್ವೀಕರಿಸುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಗಾಬರಿಯಾದ ಕುಟುಂಬ ಅವರಿದ್ದ ಮನೆಗೆ ಹೋಗಿ ನೋಡಿದ್ದಾರೆ. ಈ ವೇಳೆ ವೆಂಕಟೇಶ್ ಅವರು ಮನೆಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ಡಾ.ವೆಂಕಟೇಶ್ ಸಾವಿಗೆ ಸಹೋದ್ಯೋಗಿಗಳು ಹಾಗೂ ಸ್ಥಳೀಯರು ಕಂಬನಿ ಮಿಡಿದಿದ್ದಾರೆ. ಘಟನಾ ಸ್ಥಳದಲ್ಲಿ ಕುಟುಬದವರ ಆಕ್ರಂದನ್ ಮುಗಿಲು ಮುಟ್ಟಿದೆ.
ಇಡಿ ದಾಳಿ ವೇಳೆ 2 ಕೋಟಿ ರೂ. ಪತ್ತೆ: ಹಣದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಅಕ್ರಮ ಹಣ ವರ್ಗಾವಣೆ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಉಲ್ಲಂಘನೆ ಆರೋಪದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕುಟುಂಬದವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ನಡೆಸಿದ ದಾಳಿ ಮುಕ್ತಾಯವಾಗಿದ್ದು, ಬರೋಬ್ಬರಿ 36 ಗಂಟೆಗಳ ಕಾಲ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ದಾಳಿ ವೇಳೆ ಅಧಿಕಾರಿಗಳು ಅಪಾರ ಪ್ರಮಾಣದ ಹಣ ಹಾಗೂ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಗೋಕಾಕ್‌ದ ಹಿಲ್ಸ್ ಗಾರ್ಡನ್‌ನಲ್ಲಿರುವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಪತ್ತೆಯಾದ ಹಣವನ್ನು ಸೀಜ್ ಮಾಡಿ ಟ್ರಂಕ್‌ನಲ್ಲಿ ಬ್ಯಾಂಕ್‌ಗೆ ರವಾನಿಸಲಾಗಿದೆ ಎನ್ನಲಾಗಿದೆ. ಸತೀಶ್ ಜಾರಕಿಹೊಳಿ ಹಾಗೂ ಕುಟುಂಬದವರ ಮನೆಗಳಲ್ಲಿ ದಾಳಿ ವೇಳೆ ಇಡಿ ಅಧಿಕಾರಿಗಳು ಸುಮಾರು 3 ಕೋಟಿ ರೂ. ನಗದು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇಡಿ ದಾಳಿ ಬಳಿಕ ಪ್ರತಿಕ್ರಿಯೆ ನಿಡಿದ ಸಚಿವ ಸತೀಶ್ ಜಾರಕಿಹೊಳಿ, ಇಡಿ ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿರುವುದು ನಮ್ಮದೇ ನಗದು ಹಣ. ದಾಳಿಯಲ್ಲಿ ಸಿಕ್ಕ 2 ಕೋಟಿ ಹಣ ನಮ್ಮದು. ಅದನ್ನು ವಾಪಸ್ ಪಡೆಯಲು ಕಾನೂನು ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ಇದು ಇಡಿ ದಾಳಿಯಲ್ಲ, ಇದೊಂದು ತಪಾಸಣೆ. ಏನಾದರೂ ಅನುಮಾನಗಳಿದ್ದರೆ ನೋಟಿಸ್ ನೀಡಿ ಮಾಹಿತಿ ಕೇಳಬಹುದಿತ್ತು. ಅಧಿಕಾರಿಗಳು ಕೇಳಿದ ಮಾಹಿತಿಗೆ ನಾವು ಉತ್ತರ ನೀಡಿದ್ದೇವೆ. ಅಧಿಕಾರಿಗಳ ವಿಚಾರಣೆ ಹಾಗೂ ತನಿಖೆಗೆ ಸಂಪೂರ್ಣ ಸಹಕಾರ ನೀಡಲಾಗಿದೆ ಎಂದರು.
ವಿದೇಶದಲ್ಲಿ ಹೂಡಿಕೆ ಮಾಡುತ್ತಿರುವ ವಿಚಾರದ ಬಗ್ಗೆಯೂ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ನೋಟಿಸ್‌ನಲ್ಲಿ ಫೆಮಾ ಕಾಯ್ದೆ ಉಲ್ಲೇಖಿಸಲಾಗಿದೆ. ಆದರೆ ಹೂಡಿಕೆ ವಿಚಾರ ಇನ್ನೂ ಕಾನೂನು ಪ್ರಕ್ರಿಯೆಯಲ್ಲಿದೆ ಎಂದು ತಿಳಿಸಿದರು.
ಇಡಿ. ಅಧಿಕಾರಿಗಳು ಪ್ರತ್ಯೇಕ ತಂಡಗಳಲ್ಲಿ ಬೆಂಗಳೂರಿನ ಡಾಲರ್ಸ್ ಕಾಲೋನಿಯ ಸಚಿವ ಸತೀಶ್ ಜಾರಕಿಹೊಳಿ ನಿವಾಸ, ಕ್ರೆಸೆಂಟ್ ರಸ್ತೆಯ ಮನೆ, ಆಪ್ತರ ಮನೆಗಳು, ಚಿಕ್ಕೋಡಿಯಲ್ಲಿರುವ ಸಂಸದೆ ಪ್ರಿಯಾಂಕ ಜಾರಕಿಹೊಳಿ ಮನೆ, ಪುತ್ರ ರಾಹುಲ್ ಮನೆ, ಗೋಕಾಕ್ ನಲ್ಲಿರುವ ಮನೆ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಸತತ 36 ಗಂಟೆಗಳ ಕಾಲ ಶೋಧ ನಡೆಸಿ ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದ್ದಾರೆ.

