HomeLatest Newsವಿಜಯಪುರದಲ್ಲಿ ಹೃದಯ ವಿದ್ರಾವಕ ಘಟನೆ: ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ

ವಿಜಯಪುರದಲ್ಲಿ ಹೃದಯ ವಿದ್ರಾವಕ ಘಟನೆ: ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.

ರಾಜಶ್ರೀ ಶಂಕರ ಹಳ್ಳೂರ(31) ಆತ್ಮಹತ್ಯೆ ಮಾಡಿಕೊಂಡವರು. ಮಕ್ಕಳಾದ ತನುಶ್ರೀ(7), ಅನುಶ್ರೀ(5) ಹಾಗೂ 10 ತಿಂಗಳ ಕೂಸು ಸಂತೋಷ್ ಅವರನ್ನು ಬಾವಿಗೆ ಎಸೆದು ರಾಜಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ. ಮಿರಗಿ ಗ್ರಾಮದ ಸಮೀಪದ ಬಾವಿಯಲ್ಲಿ ಸಂಜೆ ಇಬ್ಬರು ಮಕ್ಕಳ ಶವ ತೇಲುವುದನ್ನು ಸ್ಥಳೀಯರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ರಾಜಶ್ರೀ ಪತಿ ಶಂಕರ್ ಖಾಸಗಿ ಬಸ್ ಚಾಲಕರಾಗಿದ್ದು, ಅವರು ಊರಿನಲ್ಲಿ ಇಲ್ಲದ ವೇಳೆ ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular